ಮಂಗಳೂರು: ವಿದ್ಯಾಭಾರತಿ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಬೀದರ್ ನಲ್ಲಿ ಆಗಸ್ಟ್ 31ರಿಂದ ಅಕ್ಟೋಬರ್ 2ರವರೆಗೆ ನಡೆಯಿತು. ಈ ಕ್ರೀಡಾಕೂಟದಲ್ಲಿ ಶಕ್ತಿ ಪ.ಪೂ. ಕಾಲೇಜಿನ ವಿದ್ಯಾರ್ಥಿರಿತಿಕ್ ಶೆಟ್ಟಿ ದ್ವಿತೀಯ ವಿಜ್ಞಾನ ವಿಭಾಗಎತ್ತರ ಜಿಗಿತದಲ್ಲಿ ಕಂಚಿನ ಪದಕ ಹಾಗೂ ಶಕ್ತಿ ವಸತಿ ಶಾಲೆಯ ದಿಶಾಂಕ್ 9ನೇ ತರಗತಿ ಉದ್ದ ಜಿಗಿತದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ.
ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೈಕ್, ಕಾರ್ಯದರ್ಶಿ ಸಂಜಿತ್ ನಾೈಕ್. ಪ್ರಧಾನ ಸಲಹೆಗಾರರಾದ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆಯಾದ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.