ಮಂಗಳೂರು: ರಾಜಸ್ಥಾನ ಆರ್ಟ್ ಮತ್ತು  ಕ್ರಾಫ್ಟ್ ರವರ ಸಂಯೋಜನೆಯಲ್ಲಿ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳ ಹಾಗೂ ಕೈಮಗ್ಗ  ಸೀರೆಗಳ ಹಾಗೂ  ಅಭರಣಗಳು ಮತ್ತು ಕಲಾಕೃತಿಗಳ  ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ  "ರಾಜಸ್ಥಾನಿ ಬೃಹತ್ ಮಾರಾಟ  ಮೇಳ" ತಾ| 20 /04 / 2024, ಶನಿವಾರದಂದು ನಗರದ ಬಂಟ್ಸ್ ಹಾಸ್ಟೇಲ್ ರಸ್ತೆಯ ಹೋಟೇಲ್ ವುಡ್‌ಲ್ಯಾಂಡ್ಸ್‌ ನಲ್ಲಿ ಶುಭಾರಂಭಗೊಂಡಿದ್ದು, ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ, ತೆಲಿಕೆದ ಬೊಳ್ಳಿ ಡಾ| ದೇವದಾಸ್ ಕಾಪಿಕಾಡ್ ಅವರು ದೀಪ ಪ್ರಜ್ವಲನೆಗೊಳಿಸುವ ಮೂಲಕ ಮೇಳವನ್ನು ಉದ್ಘಾಟಿಸಿದರು.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಜಸ್ಥಾನ, ಸಿಕ್ಕಿಂ, ಓರಿಸ್ಸಾ, ಕಾಶ್ಮೀರ ಸೇರಿದಂತೆ ವಿವಿಧ ರಾಜ್ಯಗಳ ಅನೇಕ ಮಂದಿ ಕುಶಲಕರ್ಮಿಗಳು ತಾವೇ ಸ್ವತಹ ತಯಾರಿಸಿದಂತಹ ಕೈಮಗ್ಗದ ಸೀರೆ, ಸಿಲ್ಕ್ ಸೀರೆಗಳು, ಅಭರಣಗಳು ಮತ್ತು ಕರಕುಶಲ ವಸ್ತುಗಳನ್ನು ಮಂಗಳೂರಿಗೆ ತಂದು ಇಲ್ಲಿ ಮಾರಾಟ ಮತ್ತು ಪ್ರದರ್ಶನವನ್ನು ಹಮ್ಮಿಕೊಂಡಿದ್ದಾರೆ. ಈ ಕುಶಲಕರ್ಮಿಗಳಿಗೆ ನಮ್ಮ ಕರಾವಳಿಯ ಜನತೆ  ಉತ್ತಮ ಬೆಂಬಲ ನೀಡುವ ಮೂಲಕ ಅವರನ್ನು ಪ್ರೋತ್ಸಾಹಿಸ ಬೇಕು ಎಂದರು.

ಬಳಿಕ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಮೇಳದ ಆಯೋಜಕರಾದ ಪ್ರಮೋದ್ ಸಿಂಗ್ ಅವರು, ಈ ಗ್ರಾಮೀಣ ಮೇಳದಲ್ಲಿ ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳ ಕೈಮಗ್ಗದ ಸೀರೆ ಹಾಗೂ ಸಿಲ್ಕ್ ಸೀರೆಗಳು ಮತ್ತು ಕರಕುಶಲ ವಸ್ತುಗಳ ಬೃಹತ್ ಸಂಗ್ರಹವಿದ್ದು, ಮಾರಾಟ ಮತ್ತು ಪ್ರದರ್ಶನ ನಡೆಯಲಿದೆ. ರಾಜಸ್ಥಾನ ಸಿಲ್ಕ್ ಸಾರಿ, ಮೈಸೂರ್ ಸಿಲ್ಕ್ ಸಾರಿ, ಓರಿಸ್ಸಾ ಸಿಲ್ಕ್ ಸೀರೆಗಳು,  ಕಾಂತ ವರ್ಕ್ ಸಿಲ್ಕ್ ಸೀರೆಗಳು,  ಕೋಸಿಯಾ ಕೈ ಮಗ್ಗದ ಸೀರೆಗಳು,  ಬಾಗಲ್ಪುರ್ ಸಿಲ್ಕ್ ಸೀರೆಗಳು, ಬನರಸ್ ಸಿಲ್ಕ್ ಸಾರಿ,  ವೆಜ್ ಡೈ ಬ್ಲಾಕ್ ಪ್ರಿಂಟೆಡ್ ಸೀರೆಗಳು, ಮಧುರೈ ಸುಗುಡಿ ಕಾಟನ್ ಸೀರೆಗಳು, ಸಾಂಬ್ಲಪುರಿ ಇಕ್ತಾ ಸೀರೆಗಳು,  ಕೈಮಗ್ಗದ ಕಾಟನ್ ಸೀರೆಗಳು,  ಚಾಂದಾರ್ ಕಾಟನ್ ಸೀರೆಗಳು,  ಪೌಂಚಪಲ್ಲಿ ಕೈಮಗ್ಗದ ಸೀರೆಗಳು, ಫೋಲ್ಕರಿ ವಿನ್ಯಾಸದ ಪಾಟಿಯಾಲ, ಫೋಲ್ಕರಿ ಬೆಡ್‌ಶೀಟ್‌ಗಳು, ಹಾಗೂ ಸೋಫಾ ಸೆಟ್ ಕವರ್, ಸಿಲ್ಕ್ ಕುಶನ್ ಕವರ್, ರಾಜಸ್ಥಾನ್ ಬೆಡ್‌ಶೀಟ್‌ಗಳು  ಹಾಗೂ ಇನ್ನಿತರ ಕೈಮಗ್ಗದ ಸೀರೆಗಳು ಇಲ್ಲಿ ಲಭ್ಯವಿರುವುದು ಎಂದರು.