ಮಂಗಳೂರು, ಆ 20: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ ರಾಜೀವ್ ಗಾಂಧಿಯವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಶಾಸಕರಾದ ಮಂಜುನಾಥ ಭಂಡಾರಿ ರವರು ಪಾಲ್ಗೊಂಡರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ ಹರೀಶ್ ಕುಮಾರ್ ,ಮಾಜಿ ಸಚಿವರಾದ ಬಿ.ರಮಾನಾಥ ರೈ ,ಶಾಸಕರಾದ ಐವನ್ ಡಿಸೋಜ ,ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಅಭ್ಯರ್ಥಿಯಾದ ಪದ್ಮರಾಜ್ ಹಾಗೂ ಸ್ಥಳೀಯ ಕಾಂಗ್ರೆಸ್ ಪಕ್ಷದ ನಾಯಕರು ಮುಖಂಡರು ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು.