ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರನ್ನು ರೋಹನ್ ಕಾರ್ಪೊರೇಷನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಮಾಲೀಕರಾದ ರೋಹನ್ ಮೊಂತೆರೋ ರವರು ಅಕಾಡೆಮಿಯ ಕಚೇರಿಯಲ್ಲಿ ಭೇಟಿ ಮಾಡಿ, ಅಭಿನಂದಿಸಿ, ಸ್ಟ್ಯಾನಿ ಅಲ್ವಾರಿಸ್ ರವರ ಮುಂದಿನ ಕಾರ್ಯ ಚಟುವಟಿಕೆಗಳಿಗೆ ತನ್ನ ಸಂಪೂರ್ಣ ಸಹಕಾರವಿದೆ ಎಂದು ಭರವಸೆ ವ್ಯಕ್ತಪಡಿಸಿದರು.