ಮಂಗಳೂರು:  ಬಿಜೆಪಿಗರು ರೌಡಿಗಳು ಜೈಲಿನಿಂದ ಬಿಡುಗಡೆಯಾಗುವಾಗ ಹಾರ ತುರಾಯಿ ಹಾಕಿ ಸ್ವಾಗತಿಸುತ್ತಾರೆ.  ವೈಯಕ್ತಿಕ ವೈಷಮ್ಯಕ್ಕೆ ಅಥವಾ ವಿರೋಧಿ ರೌಡಿ ಪಡೆಯಿಂದ ಹತನಾದರೆ ಹಿಂದೂನಾಯಕ, ದೇಶಭಕ್ತ ಎಂದು ಬಿಂಬಿಸುತ್ತಾರೆ?“ ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದರು . ಅವರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾದರು, ”ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ವೈಷಮ್ಯ, ಘರ್ಷಣೆಯಿಂದಾಗಿ ಮಂಗಳೂರಿನ ಮಾನ ಮರ್ಯಾದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ಈ ಹಿಂದೆ ಪಬ್ ದಾಳಿ, ಚರ್ಚ್ ದಾಳಿ, ಬರ್ತ್ ಡೇ ಪಾರ್ಟಿ ದಾಳಿಯಿಂದ ಪ್ರವಾಸೋದ್ಯಮಕ್ಕೆ ಕಪ್ಪು ಚುಕ್ಕೆಯಾಗಿದೆ. ಮಂಗಳೂರು ವಾಣಿಜ್ಯದಯತ್ತ ತೆರೆದುಕೊಳ್ಳುತ್ತಿರುವ ಈ ವೇಳೆಯಲ್ಲಿ ಇಂತಹ ಘಟನೆಗಳು ಸಾಮಾಜಿಕ ಸ್ವಾಸ್ಥ್ಯಕ್ಕೆ ಉದ್ದಿಮೆ,ಶಿಕ್ಷಣಕ್ಕೆ ಮಾರಕವಾಗಿದೆ“ ಎಂದರು.

ಬಂಟ್ವಾಳದಲ್ಲಿ ಬಾಲಕನೊಬ್ಬ ನಾಪತ್ತೆಯಾದಾಗ ಅದರಲ್ಲಿ ಅನ್ಯಕೋಮಿನ ಕೈವಾಡ ಎಂದು ಬಿಜೆಪಿ ನಾಯಕರೆಲ್ಲರೂ ಮನೆಗೆ ಭೇಟಿಕೊಟ್ಟು ಪ್ರಕಾರಣದ ದಿಕ್ಕು ತಪ್ಪಿಸಲು ಯತ್ನಿಸಿ ವಿಫಲರಾದರು.  ಬಾಲಕ ವಾಪಸ್ ಮನೆಗೆ ಬಂದಾಗ ಯಾರೂ ಇರಲಿಲ್ಲ. ಈಗ ಮತ್ತೆ ರೌಡಿಯ ಕೊಲೆ ಪ್ರಕರಣ ಮುಂದಿಟ್ಟು ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ಕೆಡಿಸಲು ಮುಂದಾಗಿದ್ದಾರೆ. ಹಿಂದು ಸಮಾಜ ಇವರ ಮನೋಸ್ಥಿತಿಯ ಕುರಿತು ವಿಮರ್ಶೆ ಮಾಡಿಕೊಳ್ಳಬೇಕು“ ಎಂದರು.

”ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವ ಅಗತ್ಯತೆ ಎಲ್ಲಾ ಪಕ್ಷದವರಿಗೂ ಇದೆ. ಜನಪ್ರತಿನಿಧಿಗಳ ಜವಾಬ್ದಾರಿ ಇದೇ ಆಗಿದೆ. ಕಾನೂನಿನ ಅಲ್ಪ ಜ್ಞಾನವೂ ಇಲ್ಲದೆ ಮಾತಾಡುವುದು ಬಿಜೆಪಿ ನಾಯಕರಿಗೆ ಶೋಭೆಯಲ್ಲ . ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಈಗಾಗಲೇ ಉಪಮುಖ್ಯಮಂತ್ರಿ ಅವರು ಸರ್ವಪಕ್ಷಗಳ ನಾಯಕರ ಸಭೆ ಕರೆಯುವುದಾಗಿ ಹೇಳಿದ್ದಾರೆ. ಹೀಗಿರುವಾಗ ಹಿಂದೂ ಯುವಕರ ಸಾವಿನಲ್ಲಿ ರಾಜಕೀಯ ಮಾಡುವುದನ್ನು ಬಿಡಲಿ“ ಎಂದರು.

ಕೆಪಿಸಿಸಿ ಕಾರ್ಯಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಸನ್ಮಾನ್ಯ ಶ್ರೀ ಮಂಜುನಾಥ್ ಭಂಡಾರಿ ಅವರು ಇಂದು ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ  ಕೆ ಹರೀಶ್ ಕುಮಾರ್, ಪದ್ಮರಾಜ್ ಆರ್ ಪೂಜಾರಿ, ಮಿಥುನ್ ರೈ, ಇನಾಯತ್ ಅಲಿ, ರಕ್ಸಿತ್ ಶಿವರಾಮ್, ಜಿ ಕೃಷ್ಣಪ್ಪ, ಜಿ ಎ ಬಾವ, ಶಾಲೆಟ್ ಪಿಂಟೋ, ಸಾಹುಲ್ ಹಮೀದ್, ಸುಹಾನ್ ಆಳ್ವಾ, ಲಾರೆನ್ಸ್ ಡಿ ಸೌಝ, ಸುಭಾಷ್ ಶೆಟ್ಟಿ ಕೊಲ್ನಾಡ್, ಮೊದಲದವರು ಉಪಸ್ಥಿತರಿದ್ದರು.