ಮಂಗಳೂರು: ಶಕ್ತಿ ಪದವಿ ಪೂರ್ವಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರಿಜ್ವಿತ್ ಜಗದೀಶ್ ಇವರು ಬಿಹಾರ ರಾಜ್ಯದ ಸಿವಾನ್‍ನಲ್ಲಿ ಅಕ್ಟೋಬರ್ 1ರಿಂದ 4ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಟೆಕ್ವಾಂಡೊ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆಯುವುದರ ಮೂಲಕ ಎಸ್.ಜಿ.ಎಫ್.ಐ ರಾಷ್ಟ್ರೀಯ ಮಟ್ಟದ ಟೆಕ್ವಾಂಡೊ ಚಾಂಪಿಯನ್‍ಶಿಪ್‍ಗೆ ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೈಕ್, ಕಾರ್ಯದರ್ಶಿ ಸಂಜಿತ್ ನಾೈಕ್. ಪ್ರಧಾನ ಸಲಹೆಗಾರರಾದ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆಯಾದ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.