ಮಂಗಳೂರು ಮಾ. 6: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಸಿದ್ದಿ ಸಮಾವೇಶ ಸಮಾರಂಭವನ್ನು ಮುಂಡುಗೋಡಿನ ಲೊಯೊಲಾ ವಿಕಾಸ ಕೇಂದ್ರದಲ್ಲಿ ಮಾರ್ಚ್15 ಮತ್ತು 16 ರಂದು ಆಯೋಜಿಸಲಾಗಿದೆ. ಸಮಾರಂಭದಲ್ಲಿ ಸಿದ್ದಿ ಸಂಸ್ಕೃತಿ ಬಿಂಬಿಸುವ ಜಾನಪದ ಕಲಾತಂಡಗಳ ಪ್ರದರ್ಶನವು ಮೆರವಣಿಗೆಯೊಂದಿಗೆ ವೈಭವಯುತವಾಗಿ ನಡೆಯಲಿದೆ ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.