ಮಂಗಳೂರು: ನಗರದ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜು (ಹಿಂದಿನ ಸರಕಾರಿ ಕಾಲೇಜು) ಹಳೆ ವಿದ್ಯಾರ್ಥಿ ಸಂಘ ಇದರ ಬೈಲಾ ತಿದ್ದುಪಡಿಯ ಬಗ್ಗೆ ವಿಶೇಷ ಮಹಾ ಸಭೆಯನ್ನು ಜುಲೈ 27 ರಂದುಬೆಳಿಗ್ಗೆ 10.30 ಗಂಟೆಗೆ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಡಾ. ಶಿವರಾಮ ಕಾರಂತ ಸಭಾ ಭವನದಲ್ಲಿ ನಡೆಯಲಿದೆ.
ಸಭೆಗೆ ಸಂಘದ ಎಲ್ಲಾ ಸದಸ್ಯರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.