ಮಂಗಳೂರು: 2022ನೇ ಸಾಲಿನಲ್ಲಿ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕಗಳನ್ನು ಆಯ್ಕೆ ಸಮಿತಿಯು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ಆಗಸ್ಟ್ 20 ರಿಂದ 22 ರವರೆಗೆ (ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ) ಡಾ. ವಿಷ್ಣುವರ್ಧನ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ, ಎಂ.ಸಿ. ಬಡಾವಣೆ, (ಡಾ. ಬಾಲಗಂಗಾಧರನಾಥ ಸ್ವಾಮೀಜಿ, ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹತ್ತಿರ) ವಿಜಯನಗರ, ಬೆಂಗಳೂರು ಇಲ್ಲಿ ಏರ್ಪಡಿಸಲಾಗಿದೆ.
ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸಲ್ಲಿಸಿದ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 30 ರೊಳಗಾಗಿ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು 560001 ಇಲ್ಲಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2441905/2425873 ಸಂಪರ್ಕಿಸಬಹುದು ಎಂದು ಮಂಗಳೂರು ಜಿಲ್ಲಾ ಗ್ರಂಥಾಲಯ ಕೇಂದ್ರದ ಮುಖ್ಯ ಗ್ರಂಥಾಲಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.