ಮಂಗಳೂರು: 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅಂತರಾಷ್ಟ್ರೀಯ ಮತ್ತುರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡುವ ಕಾರ್ಯಕ್ರಮಕ್ಕೆ ಅರ್ಜಿಆಹ್ವಾನಿಸಲಾಗಿದೆ.
ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳು ನಿಗದಿತ ಅರ್ಜಿ ನಮೂನೆಯನ್ನು ಕಛೇರಿಯಲ್ಲಿ ಪಡೆದು ಸೆಪ್ಟೆಂಬರ್ 20ರೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಕಛೇರಿಯಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು, ದೂರವಾಣಿ ಸಂಖ್ಯೆ-0824-2451264 ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.