ಮಂಗಳೂರು: ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಟೆಕ್ವಾಂಡೊ ಚಾಂಪಿಯನ್‍ಶಿಪ್ ಹಾವೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ, 3 ರಿಂದ ಡಿ, 4 ರ ವರೆಗೆ ನಡೆಯಿತು.
ಈ ಚಾಂಪಿಯನ್‍ಶಿಪ್‍ನಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರಿಜ್ವಿತ್ ಜಗದೀಶ್ ಭಾಗವಹಿಸಿ ಪ್ರಥಮ ಸ್ಥಾನ ಪಡೆದು SGFI ರಾಷ್ಟ್ರೀಯ ಮಟ್ಟಕ್ಕೆಅಯ್ಕೆಯಾಗಿರುತ್ತಾನೆ. ಅದೇ ರೀತಿ ಹರ್ಷವೇಣಿ ಬಾಲಕಿಯ ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾಳೆ.
ಈ ಸಂಧರ್ಭದಲ್ಲಿ ಇವರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೈಕ್, ಕಾರ್ಯದರ್ಶಿ ಸಂಜಿತ್ ನಾೈಕ್. ಪ್ರಧಾನ ಸಲಹೆಗಾರರಾದ ರಮೇಶ್ ಕೆ. ಶಕ್ತಿ ಪದವಿಪೂರ್ವಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆಯಾದ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.