ಮಂಗಳೂರು:  2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸೆಪ್ಟೆಂಬರ್ 10ರಂದು ಬೆಳಿಗ್ಗೆ 9:30 ಕ್ಕೆ ಸರ್ಕಾರಿ ನೌಕರರ ಸಂಘದ ಕಟ್ಟಡದ ನಂದಿನಿ ಹಾಲ್ ನಲ್ಲಿ  ನಡೆಯಲಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಅಧ್ಯಕ್ಷ ಸಿ.ಎಸ್ ಷಡಾಕ್ಷರಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಗಳಾದ ಡಾ. ಬಿಂದು ಉದಯ್‍ಕುಮಾರ್‍ ಅವರಿಂದ“ಒತ್ತಡ ನಿರ್ವಹಣೆ”ಕಾರ್ಯಗಾರವನ್ನು ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಚ್‍ ಗಣೇಶ್‍ರಾವ್‍ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.