ಮಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಂಟಿ ಶೆಲ್ಕೆ, ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯ ಕೆ.ಆರ್ ಅವರ ಉಪಸ್ಥಿತಿಯಲ್ಲಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಹಾಗೂ ಚುನಾವಣಾ ತಯಾರಿ ಸಭೆ ಶುಕ್ರವಾರ ಮಂಗಳೂರು ಮಲ್ಲಿಕಟ್ಟೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್, ಯುವ ಕಾಂಗ್ರೆಸ್ ವತಿಯಿಂದ ಅನಾವರಣಗೊಳಿಸಿರುವ "with IYC" ಎಂಬ ಆಪ್ ಮೂಲಕ ಪ್ರತಿ ಬೂತ್ ಗಳಲ್ಲಿ 5 ಕಾರ್ಯಕರ್ತರನ್ನು ಸೇರಿಸಲಾಗುವುದು. ಈ ಮೂಲಕ ಜಿಲ್ಲೆಯಾದ್ಯಂತ "ಯೂತ್ ಜೋಡೋ ಬೂತ್ ಜೋಡೋ" ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿ ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ಆಧ್ಯತೆ ನೀಡಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೊ, ಕೆಪಿಸಿಸಿ ಕಾರ್ಯದರ್ಶಿಗಳಾದ ಅಶಿತ್ ಪಿರೇರಾ, ನಾಸೀರ್ ಸಾಮಾನಿಗೆ, ಜಿಲ್ಲಾ ಉಪಾಧ್ಯಕ್ಷರಾದ ಗಿರೀಶ್ ಆಳ್ವ, ಅಭಿಷೇಕ್ ಬೆಳ್ಳಿಪ್ಪಾಡಿ, ಸೌಮ್ಯಲತ, ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರುಗಳು ಮತ್ತು ಬ್ಲಾಕ್ ಪದಾಧಿಕಾರಿಗಳು ಉಪಸ್ಥಿತರಿದ್ದರು.