ಮಂಗಳೂರು,ಅ.14: ದಕ್ಷಿಣಕನ್ನಡ ಜಿಲ್ಲೆಯಲ್ಲಿಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆಎಂಡೋಸಲ್ಫಾನ್ ಸಂತ್ರಸ್ತರು ಹೆಚ್ಚಾಗಿರುವಂತಹ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ.
ಅಕ್ಟೋಬರ್ 15ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿ¯, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಅಕ್ಟೋಬರ್ 16ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಅಕ್ಟೋಬರ್ 19ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನುಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.