ಮಂಗಳೂರು, ಡಿಸೆಂಬರ್ 15:- ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ಬಾಷೆ, ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಗೆ ಸಂಬಂಧಿಸಿದ ವಿವಿಧ ಯೋಜನೆಗಳ ಸಹಾಯಧನ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಪಿ.ಹೆಚ್.ಡಿ ಮತ್ತು ಎಂ.ಫಿಲ್.ಪದವಿ ಪಡೆದ ಮಹಾಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಸೇವಾಸಿಂಧು ಮೂಲಕ ಹಾಗೂ ಸೃಜನೇತರ ಪ್ರಕಟಿತ ಗ್ರಂಥಗಳಿಗೆ ನಿಗದಿತ ಅರ್ಜಿ ನಮೂನೆಯನ್ನು ಇಲಾಖೆಯ ವೆಬ್ ಸೈಟ್ www.kannadasiri.in ನಲ್ಲಿ ಪಡೆದು ಜನವರಿ 16 ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ತುಳು ಭವನ ಉರ್ವಸ್ಟೋರ್, ಅಶೋಕನಗರ ದೂ.ಸಂ: 0824-2451527, 2951327 ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.