ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ, ನಡೆದಂತಹ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ " ಜನರಲ್ ಕೆ.ಎಸ್ ತಿಮ್ಮಯ್ಯ" ನಗದು ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.

ಹೆಚ್ಚಿನ ಮಾಹಿತಿಗೆ ಅಥವಾ ಅರ್ಜಿ ಸಲ್ಲಿಸಲು ಮಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಾರ್ಯಾಲಯ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.