ಮಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಸಾಮೂಹಿಕ ಏತ ನೀರಾವರಿ ಕಾಮಗಾರಿಗಳನ್ನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸಲು ಆಸಕ್ತಿ ಇರುವ ಕೃಷಿಕರು ಮನವಿ ಸಲ್ಲಿಸಬಹುದು.
ಜನವರಿ 31 ರೊಳಗೆ ಕೆ.ಎಂ.ಡಿ.ಸಿ ಜಿಲ್ಲಾಕಚೇರಿಗೆ ಮನವಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 0824-2951644 ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.