ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಯುವಜನರಿಗೆ “ ಜಿಮ್ ಫಿಟ್ನೆಸ್” ಹಾಗೂ ನಿರೂಪಣಾ ಮತ್ತು ವಾರ್ತಾ ವಾಚಕ ತರಬೇತಿ’’ ಶಿಬಿರವನ್ನು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದು, ಶಿಬಿರದಲ್ಲಿ ಹಾಜರಾಗಲು ಆಸಕ್ತ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜನವರಿ 27 ರಿಂದ ಫೆಬ್ರವರಿ 2 ರವರೆಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ “ಜಿಮ್ ಫಿಟ್ನೆಸ್ ತರಬೇತಿ”ಹಾಗೂ ನಿರೂಪಣಾ ಮತ್ತು ವಾರ್ತಾ ವಾಚಕ ತರಬೇತಿ ಶಿಬಿರ ಫೆಬ್ರವರಿ 11 ರಿಂದ 18 ರವರೆಗೆ ಯವನಿಕ ಸಭಾಂಗಣದಲ್ಲಿ ನಡೆಯಲಿದೆ. ದ್ವಿತೀಯ ಪಿಯುಸಿ (ಪಾಸ್ /ಫೇಲ್) ವಿದ್ಯಾರ್ಹತೆ ಹೊಂದಿದವರು, ಕನಿಷ್ಠ 18 ರಿಂದ ಗರಿಷ್ಠ 40 ವರ್ಷದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲುಕೊನೆಯ ದಿನ ಜನವರಿ 24.
ಶಿಬಿರದಲ್ಲಿ ಹಾಜರಾಗುವ ಯುವಕ/ಯುವತಿಯರಿಗೆ ಲಘು ಉಪಹಾರ ಒದಗಿಸಲಾಗುತ್ತದೆ. ಹೊರ ಜಿಲ್ಲೆಗಳಿಂದ ಭಾಗವಹಿಸುವ ಯುವತಿಯರಿಗೆ ಸಾಮಾನ್ಯ ವಸತಿ ವ್ಯವಸ್ಥೆಯನ್ನು ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಹಾಗೂ ಅರ್ಜಿ ನಮೂನೆ ಮತ್ತು ಮಾರ್ಗಸೂಚಿಯನ್ನು ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ (ದೂ.ಸಂ. 0824-2451264)ಕಚೇರಿ ಸಂಪರ್ಕಿಸಬಹುದು ಹಾಗೂ ಭರ್ತಿ ಮಾಡಿದ ಅರ್ಜಿ ನಮೂನೆ ಹಾಗೂ ದಾಖಲೆಗಳನ್ನು ಮಂಗಳಾ ಕ್ರೀಡಾಂಗಣ ಕಚೇರಿಗೆ ತಲುಪಿಸಬೇಕು ಎಂದು ಪ್ರಕಟಣೆ ತಿಳಿಸಿದೆ.