ಮಂಗಳೂರು: ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಆಯಾ ಉಪವಿಭಾಗಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಪ್ರತೀ ತಿಂಗಳು ಕುಂದುಕೊರತೆ ಸಭೆ ನಡೆಸಬೇಕು ಎಂದು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಕ್ರೀಡಾಪಟುಗಳಿಗೆ ಸೌಲಭ್ಯಗಳನ್ನು ಆಯಾ ಸ್ಥಳೀಯ ಸಂಸ್ಥೆಗಳು ತಮ್ಮ ಮೀಸಲು ನಿಧಿಯಲ್ಲಿ ಮಂಜೂರು ಮಾಡಬಹುದು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಹೇಮಲತಾ ಅವರು,  ಪ್ರಸಕ್ತ ಸಾಲಿನಲ್ಲಿ ಜನವರಿಯಿಂದ ನವೆಂಬರ್ 20ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 45 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 36 ಪ್ರಕರಣಗಳಲ್ಲಿ ರೂ. 34 ಲಕ್ಷ ಪರಿಹಾರ ಮಂಜೂರು ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಡಿಸಿಪಿ ಸಿದ್ಧಾರ್ಥ್ ಗೋಯಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ, ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ವಿವಿಧ ಇಲಾಖೆ ಅಧಿಕಾರಿಗಳು, ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ಪೌರಕಾರ್ಮಿಕರ ಪ್ರತಿನಿಧಿಗಳು ಉಪಸ್ಥಿತರಿದ್ದರು.