ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿಯಲ್ಲಿ ಭೇಟಿ ಮಾಡಿದ ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ, ಆಶೀರ್ವಾದ ಪಡೆದರು.
ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ ಅವರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಭೇಟಿ ಮಾಡಿದರು.
ರಿಷಿಕಾ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಭವಿಷ್ಯ ಉಜ್ವಲವಾಗಿರಲಿ ಎಂದು ಸಿಎಂ ಹಾರೈಸಿದರು. ಈ ಸಂದರ್ಭದಲ್ಲಿ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ್, ಜಿತೇಂದ್ರ ಕುಂದೇಶ್ವರ ಇದ್ದರು.
ಪ್ರೆಸ್ ಕ್ಲಬ್ ಗೌರವ
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ರಿಷಿಕಾ ಕುಂದೇಶ್ವರ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ. ವಿ. ಪ್ರಭಾಕರ, ವಸತಿ ಸಚಿವರ ಮಾಧ್ಯಮ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ, ಬಹುರೂಪಿ ಸಂಸ್ಥೆಯ ಅಧ್ಯಕ್ಷ ಜಿಎನ್ ಮೋಹನ್, ಪ್ರಸಿದ್ಧ ಯಕ್ಷಗಾನ ಕಲಾವಿದ ಜಬ್ಬಾರ್ ಸುಮೋ , ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್ ಜಿ, ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ಪತ್ರಕರ್ತರ ಸಂಘದ ಉಪಾಧ್ಯಕ್ಷ ಭವಾನಿಸಿಂಗ್, ಕೋಶಾಧಿಕಾರಿ ವಾಸುದೇವ ಹೊಳ್ಳ ಇದ್ದರು.
ಕನ್ನಡ ರಾಜ್ಯೋತ್ಸವ ಪ್ರಶಸ್ತಿ:
ಬೆಂಗಳೂರು: ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ ಸಭಾಮಂದಿರದಲ್ಲಿ ನಬಿ ರೋಷನ್ ಮತ್ತು ಶಾಫಿಯ ಪ್ರಕಾಶನ ವತಿಯಿಂದ ರಿಷಿಕಾ ಕುಂದೇಶ್ವರ ಅವರನ್ನು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಮಾಜಿ ಡಿಐಜಿಪಿ ರಾಜಪ್ಪ ಮತ್ತಿತರರು ಇದ್ದರು.