ಮಂಗಳೂರು: ಶ್ರೇಷ್ಠ ಕಲಿಕೆಯೊಂದಿಗೆ ಉತ್ತಮ ನೈರ್ಮಲ್ಯ ಅಭ್ಯಾಸಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕಾಗಿದೆ. ಪರಿಸರ ಕಾಳಜಿಯೊಂದಿಗೆ ಓದು ಉತ್ತಮಗೊಳ್ಳುತ್ತದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಜಯಪ್ರಕಾಶ್ ಹೇಳಿದರು.
ಅವರು ಶುಕ್ರವಾರ ಸರಕಾರಿ ಪ್ರೌಢಶಾಲೆ ಕಾಯತಡ್ಕ ಕಳೆಂಜದಲ್ಲಿ ಮಾಹಿತಿ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲಾಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಕಡೆಂದ ಇವರ ಸಹಭಾಗಿತ್ವದಲ್ಲಿ ಮಕ್ಕಳಿಗೆ ಚಿತ್ರಕಲೆ ಬಿಡಿಸುವ ಸ್ಪರ್ಧೆ ಮತ್ತು ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರು ಅಧ್ಯಕ್ಷತೆಯನ್ನು ವಹಿಸಿದ್ದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ, ಜಿಲ್ಲಾ ಪಂಚಾಯತ್ ಡಿಪಿಎಂ ವಿಜ್ಞೇಶ್ ರಾಜ್ ಮತ್ತು ಪಂಚಾಯತ್ ಸದಸ್ಯರು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಗೆ ಚಿತ್ರಬಿಡಿಸುವ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು ಸಂಯೋಜಕ ಶಿವರಾಂ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಆನಂದ್ ಕಾರ್ಯಕ್ರಮ ನಿರೂಪಿಸಿದರು.