ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಸ್ಪರ್ಧಿಸಿದ ಜಿಲ್ಲಾ ಸಮಿತಿ, ವಿಧಾನಸಭಾ ಸಮಿತಿ ಹಾಗೂ ಬ್ಲಾಕ್ ಸಮಿತಿ ಪದಾಧಿಕಾರಿಗಳ ಪ್ರಥಮ ಸಭೆಯು ಮಂಗಳವಾರದಂದು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಯುವ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷ ಇಬ್ರಾಹೀಂ ನವಾಜ್ ಪ್ರಾಸ್ತಾವಿಕ ಮಾತನಾಡಿದರು. ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ, ಮಾಜಿ ಸಚಿವ ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ, ಪದ್ಮರಾಜ್.ಆರ್ ಪೂಜಾರಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಕಿರಣ್ ಬುಡ್ಲೆಗುತ್ತು, ಕಾಂಗ್ರೆಸ್ ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಸುಭೋದಯ ಆಳ್ವ, ಜಾಕಿಂ ಡಿಸೋಜ, ನೀರಜ್ ಪಾಲ್, ಗಿರೀಶ್ ಶೆಟ್ಟಿ, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಗಳಾದ ಶ್ರೀಪ್ರಸಾದ್ ಪಾಣಾಜೆ, ರವೂಫ್ ಸಿಎಂ, ಜಿಲ್ಲಾ ಉಪಾಧ್ಯಕ್ಷರಾದ ದೀಕ್ಷಿತ್ ಅತ್ತಾವರ, ಬಶೀರ್, ಸುನೀತ್, ವಿನೋಲ ಹಾಗೂ ಜಿಲ್ಲಾ, ವಿಧಾನಸಭಾ, ಬ್ಲಾಕ್ ಸಮಿತಿಯ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.