ವರದಿ ರಾಯಿ ರಾಜಕುಮಾರ ಮೂಡುಬಿದಿರೆ 

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಸೂಕ್ತ ಹಾಗೂ ನ್ಯಾಯ ಸಮ್ಮತ ತನಿಖೆಗೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆ ಸಂಸದರು, ಶಾಸಕರುಗಳು  ಮಂಗಳೂರು ಪೊಲೀಸ್ ಕಮಿಷನರ್ ಜೊತೆ ಸಭೆ ನಡೆಸಿದರು. 

ಸಭೆಯಲ್ಲಿ ಸಂಸದ ಬ್ರಿಟಿಷ್ ಚೌಟ, ಶಾಸಕರುಗಳಾದ ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಸುನಿಲ್ ಕುಮಾರ್, ಭಾಗಿರತಿ ಮುರುಳ್ಯ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್, ಬಿಜೆಪಿ ಯ ಮುಂದಾಳುಗಳು ಹಾಜರಿದ್ದರು.