ಮಂಗಳೂರು, ಮೇ 22:  ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಮತ್ತು ಬೆಸೆಂಟ್ ಮಹಿಳಾ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಪ್ರಶಸ್ತಿ ಹಾಗೂ ಪ್ರಮಾಣ ಪತ್ರ ಪ್ರಧಾನ ಸಮಾರಂಭ ಮೇ 24 ರಂದು  ಬೆಳಿಗ್ಗೆ 10:30 ಗಂಟೆಗೆ   ನಗರದ ಬೆಸೆಂಟ್  ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಎಸ್.ಜೆ.  ಅಧ್ಯಕ್ಷತೆಯಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ  ಉಪನಿರ್ದೇಶಕಿ ಅನಿತಾ ವಿ. ಮಡ್ಲೂರು  ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.