ಮಂಗಳೂರು, ನ.27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ, ಹಳೆಯಂಗಡಿ ಗ್ರಾಮ ಪಂಚಾಯತ್ ಹಾಗೂ ಸಸಿಹಿತ್ಲು ಯುವಕ, ಯುವತಿ ಮಂಡಲ ಇವರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಡಿಸೆಂಬರ್ 1 ರಂದು ಬೆಳಗ್ಗೆ 9 ಗಂಟೆಗೆ ಸಸಿಹಿತ್ಲು ಹಳೆ ವಿದ್ಯಾರ್ಥಿ ಸಂಘದ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸುವರು.