ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ದಕ್ಷಿಣಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 17ರಂದು ಸಂಜೆ 4 ಗಂಟೆಗೆ ತೋಕೂರು ಜೋಕಟ್ಟೆ ಸರ್ಕಾರಿ ಆಯುರ್ವೇದ ಆಸ್ಪತ್ರೆಯನ್ನು ರಾಷ್ಟ್ರೀಯ ಆಯುಷ್ ಅಭಿಯಾನದಡಿ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶಂಕುಸ್ಥಾಪನೆ ನಡೆಯಲಿದೆ.
ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ಶಾಸಕ ಉಮಾನಾಥ ಎ ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ.