ಮಂಗಳೂರು, ಜೂ.12: ವಿಶೇಷ ಕಾರ್ಯಪಡೆ ಘಟಕದ ಉದ್ಘಾಟನಾ ಸಮಾರಂಭ ಜೂನ್ 13 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ.
ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ, ಗೃಹ ಸಚಿವಡಾ. ಜಿ ಪರಮೇಶ್ವರ ಉದ್ಘಾಟಿಸಲಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೌರವ ಉಪಸ್ಥಿತಿಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.