ಮಂಗಳೂರು: ದ.ಕ. ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಜಾಲ್ ಇಲ್ಲಿ ನೂತನ ದ್ವಿಭಾಷೆ ಅಂಗ್ಲ –ಕನ್ನಡ ಮಾಧ್ಯಮ ಶಾಲೆಯ ಒಂದನೇ ತರಗತಿ ಕೊಠಡಿ ಉದ್ಘಾಟನಾ ಸಮಾರಂಭವನ್ನು ವಿಧಾನ ಪರಿಷತ್ ಶಾಸಕರಾದ ಐವನ್ ಡಿʼಸೋಜಾರವರು ನೇರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಐವನ್ ಡಿʼಸೋಜಾ ಇವರು ಕರ್ನಾಟಕವು ಇಂದು ಮಕ್ಕಳ ಸರ್ವಾಂಗೀಣ ಪ್ರಗತಿಯ ದೃಷ್ಟಿಯಿಂದ ದ್ವೀಭಾಷಿಯ ಶಾಲೆಗಳನ್ನು ಪ್ರಾರಂಭಿಸಲಾಗಿದ್ದು, ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿ ಕನ್ನಡ ಮತ್ತು ಅಂಗ್ಲ ಮಾದ್ಯಮದ ಶಿಕ್ಷಣವನ್ನು ನೀಡಲು ಪ್ರಾರಂಭಿಸಿದೆ. ಇದರ ಪ್ರಯೋಜನವನ್ನು ಪಡೆದು ವಿದ್ಯಾರ್ಥಿಗಳು ಹೆಚ್ಚು ಪ್ರಬುದ್ದರಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಐವನ್ ಡಿʼಸೋಜಾ ತಿಳಿಸಿದರು. ಅನೇಕ ಕನ್ನಡ ಮಾಧ್ಯಮಾ ಶಾಲೆಗಳಲ್ಲಿ ಇಂದು ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಅನೇಕ ಶಾಲೆಗಳು ಮುಚ್ಚುವ ಮಟ್ಟಕ್ಕೆ ಬರುತ್ತಿದ್ದು, ಇದನ್ನು ತಡೆಯಲು ಇಲ್ಲಿ ಕಲಿತಂತಹ ಹಳೆ ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚು ಮುತುವರ್ಜಿ ವಹಿಸಿ, ಕಾರ್ಯಕ್ರಮವನ್ನು ರೂಪಿಸಬೇಕಾಗಿದೆ. ಸ್ಥಳೀಯ ಮಟ್ಟದಲ್ಲಿ ಹಳೆ ವಿದ್ಯಾರ್ಥಿಗಳು ಶಾಲೆಯ ಅಭಿವೃದ್ದಿಗಾಗಿ ಕೆಲಸ ಮಾಡಬೇಕಾಗುದರ ಜೊತೆಗೆ ಶಾಲೆಗೆ ಬೇಕಾದ ಮೂಲಭೂತ ಸೌಲಭ್ಯವನ್ನು ಒದಗಿಸಿಕೊಡುವಲ್ಲಿ ಹೆಚ್ಚು ಕಾರ್ಯಕ್ರಮವನ್ನು ಮಾಡಬೇಕಾಗಿದೆ ಎಂದು ಸಮಾರಂಭವನ್ನು ಉದ್ದೇಶಿಸಿ, ಐವನ್ ಡಿʼಸೋಜಾರವರು ಮಾತನಾಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಅಶ್ರಫ್ ಬಜಾಲ್ ಶಾಲೆಯ ಮುಖ್ಯೋಪಾಧ್ಯಾಯಿನಿ ಗ್ಲಾಡಿಸ್, ಆನಂದ್ ರಾವ್, ಇಸಾಕ್ ಪರ್ಮಾರ್, ಭಾರತೀಶ್ ಅಮಿನ್, ಆಸಿಫ್ ಬಜಾಲ್ ಮುಂತಾದವರು ಉಪಸ್ಥಿತರಿದ್ದರು.