ಮಂಗಳೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆ, ದ.ಕ ಜಿಲ್ಲಾಕೇಂದ್ರ ಗ್ರಂಥಾಲಯ ಇದರ ಕೇಂದ್ರ ಕಚೇರಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಫೆಬ್ರವರಿ 17ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಯೆಯ್ಯಾಡಿ ಕೈಗಾರಿಕಾ ಪ್ರದೇಶದಲ್ಲಿ ನಡೆಯಲಿದೆ.
ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ.
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಡಾ| ಎಸ್. ಆರ್. ರಂಗನಾಥನ್ ರವರ ಪುತ್ಥಳಿ ಅನಾವರಣ ಮಾಡಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.