ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಡಿ. 5ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ಪತ್ರಕರ್ತರ 5ನೇ ಜಿಲ್ಲಾ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಶನಿವಾರ ಬಿಡುಗಡೆಗೊಳಿಸಿದರು.
ಶಾಸಕ ಡಾ.ವೈ. ಭರತ್ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಮುಡಾ ಆಯುಕ್ತೆ ನೂರ್ ಜಹರಾ ಖಾನಂ ಮುಖ್ಯ ಅತಿಥಿಗಳಾಗಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್. ಬಿ.ಎನ್ ಉಪಸ್ಥಿತರಿದ್ದರು.