ಮಂಗಳೂರು, ನ.14: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 18 ರಂದು ಬೆಳಿಗ್ಗೆ 10.30 ಗಂಟೆಗೆ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ನಡೆಯಲಿದೆ.
ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರ ಉಪಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ನಿವೃತ್ತ ಪ್ರಾಧ್ಯಪಕ ಪ್ರೊ. ಬಿ.ಶಿವರಾಮ್ ಶೆಟ್ಟಿ ಅವರು ಕನಕ ಜಯಂತಿ ಬಗ್ಗೆ ಸಂದೇಶ ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ ತಿಳಿಸಿದೆ.