ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ 60 ವಾರ್ಡ್‍ಗಳ ಎಲ್ಲಾ ಉದ್ದಿಮೆದಾರರು ಕಡ್ಡಾಯವಾಗಿ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳಬೇಕಾಗಿದ್ದು, ಆನ್‍ಲೈನ್ ತಂತ್ರಾಶದ ಮುಖಾಂತರ ಹೊಸ ಉದ್ದಿಮೆದಾರರು ಅರ್ಜಿಯನ್ನು ಸಲ್ಲಿಸಿ ಉದ್ದಿಮೆ ಪರವಾನಿಗೆ ಪಡೆಯುವುದು ಅತ್ಯವಶ್ಯಕವಾಗಿದೆ. 

ಉದ್ದಿಮೆ ನಡೆಸುತ್ತಿರುವ ಉದ್ದಿಮೆದಾರರು ಈ ಹಿಂದಿನ ಆರ್ಥಿಕ ವರ್ಷದಲ್ಲಿ ಪಡೆದುಕೊಂಡಿರುವ ಉದ್ದಿಮೆ ಪರವಾನಿಗೆ ನವೀಕರಿಸದೆ ಇದ್ದಲ್ಲಿ ಹಿಂದಿನ ಬಾಕಿಯನ್ನು ಹಾಗೂ ನವೀಕರಣ ಶುಲ್ಕವನ್ನು ಆನ್‍ಲೈನ್‍ನಲ್ಲಿ ಈ ಕೂಡಲೇ ಪಾವತಿಸುವಂತೆ ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಪಾಲಿಕೆಯ ಆರೋಗ್ಯ ನಿರೀಕ್ಷಕರು ಸ್ಥಳ ಪರಿಶೀಲನೆಯ ಸಮಯದಲ್ಲಿ ಉದ್ದಿಮೆ ಪರವಾನಿಗೆ ಇಲ್ಲದ ಹಾಗೂ ಈವರೆಗೂ ನವೀಕರಣ ಮಾಡದ ಉದ್ದಿಮೆದಾರರಿಗೆ ನಿಯಾಮಾನುಸಾರ ಹೆಚ್ಚುವರಿ ದಂಡ ವಿಧಿಸಲಾಗಿ, ಮುಂದಿನ ಕ್ರಮ ಜರುಗಿಸಲಾಗುತ್ತದೆ . 

ಹೆಚ್ಚಿನ ಮಾಹಿತಿಗೆ  ದೂ.ಸಂ: 6364016555 ಹಾಗೂ ವೆಬ್‍ಸೈಟ್ mcctradelicense.com ಸಂಪರ್ಕಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.