ಮಂಗಳೂರು, ಅ.16: ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅಕ್ಟೋಬರ್ 16 ರಿಂದ 19ರ ವರೆಗೆ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇರುವುದರಿಂದ ಈ ಅವಧಿಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರಬೇಕು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಹೊಗದಂತೆ ಸಾರ್ವಜನಿಕರು/ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸಬೇಕು ಜಿಲ್ಲಾ  ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.