ಮಂಗಳೂರು,ಅ.10: ಮುಂಗಾರು ಅವಧಿ ಮುಕ್ತಾಯವಾಗಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇರುವ ಜಲಪಾತ, ನದಿ, ಸಮುದ್ರ, ಜಲಾಶಯ ಪ್ರದೇಶಗಳಲ್ಲಿ ಸಾರ್ವಜನಿಕರು/ಪ್ರವಾಸಿಗರು ನೀರಿನಲ್ಲಿ ಇಳಿಯುವುದು, ಈಜುವುದು. ಸಾಹಸ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂಧಿಸಿ ಜುಲೈ 6ರಂದು ಹೊರಡಿಸಿರುವ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ.