ಮಂಗಳೂರು: 2025ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-3 ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಜುಲೈ 17 ರಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಉರ್ವಾಕೆನರಾ ಹೈಸ್ಕೂಲ್‍ನ ಮೌಲ್ಯಮಾಪನ ಕೇಂದ್ರದಲ್ಲಿ ನಡೆಯಲಿದ್ದು, ಮೌಲ್ಯಮಾಪನ ಕಾರ್ಯವು ನಡೆಯುವ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮೌಲ್ಯಮಾಪನ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪ ಪೋಲಿಸ್ ಆಯುಕ್ತ ಕೆ.ರವಿಶಂಕರ್ ಆದೇಶಿಸಿದ್ದಾರೆ.