ಮಂಗಳೂರು ಫೆ.18: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯಕುಂಬಾರರ ಮಹಾ ಸಂಘ, ಕರಾವಳಿ ವಿಭಾಗ ಮತ್ತು ಕರಾವಳಿ ಕುಲಾಲ/ಕುಂಬಾರರ ಯುವ ವೇದಿಕೆ ಇವರ ಸಹಕಾರದೊಂದಿಗೆ ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮ ಫೆಬ್ರವರಿ 20ರಂದು ಬೆಳಗ್ಗೆ 10.30 ಗಂಟೆಗೆ ನಗರದ ಬೊಂದೆಲ್ ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಇಲ್ಲಿ ನಡೆಯಲಿದೆ.
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ವಾಣಿಜ್ಯ ವಿಭಾಗ ಪ್ರಾಧ್ಯಾಪಕ ಡಾ. ಯತೀಶ್ ಕುಮಾರ್ ಸಂತ ಕವಿ ಸರ್ವಜ್ಞ ಜಯಂತಿ ಸಂದೇಶವನ್ನು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.