ಮಂಗಳೂರು, ಫೆ 4: ಸುಳ್ಯ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಡೇ-ನಲ್ಮ್‍ ಯೋಜನೆಯಡಿಯಲ್ಲಿ ರಚಿಸಲಾಗಿರುವ ಅರ್ಹ ಮಹಿಳಾ ಗುಂಪುಗಳನ್ನು ತೊಡಗಿಸಿಕೊಂಡು ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕವನ್ನು ವಸೂಲಾತಿ/ಸಂಗ್ರಹಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಡೇ- ನಲ್ಮ್‍ ಯೋಜನೆಯಡಿಯಲ್ಲಿ ರಚಿಸಲಾಗಿರುವ ನೋಂದಾಯಿಸಿದ ಕನಿಷ್ಟ 3 ವರ್ಷ ಆಗಿರುವ ಸ್ವಸಹಾಯ ಗುಂಪಿನ ಸದಸ್ಯರು ಕನಿಷ್ಟ 7ನೇ ತರಗತಿ ಹಾಗೂ ಎಲೆಕ್ಟ್ರಾನಿಕ್ ಪರಿಕರಗಳನ್ನು ಬಳಸುವ ಸಾಮರ್ಥವನ್ನು ಹೊಂದಿರತಕ್ಕದ್ದು. ಹೆಚ್ಚಿನ ಶಿಕ್ಷಣವನ್ನು ಪಡೆದವರಿಗೆ ಆದ್ಯತೆ ನೀಡಲಾಗುವುದು. ಆಸಕ್ತಿಯುಳ್ಳ ಡೇ-ನಲ್ಮ್‍ ಯೋಜನೆಯಡಿ ರಚಿಸಲಾದ ಮಹಿಳಾ ಸ್ವ- ಸಹಾಯ ಗುಂಪಿನ ಸದಸ್ಯರುಗಳು ಫೆಬ್ರವರಿ 10 ರಂದು ಸಂಜೆ 4 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸುಳ್ಯ ಪಟ್ಟಣ ಪಂಚಾಯತ್‍ ಡೇ -ನಲ್ಮ್ ವಿಭಾಗವನ್ನು ಸಂಪರ್ಕಿಸುವಂತೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.