ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಯೋಗದೊಂದಿಗೆ ವಾಲ್ಮೀಕಿ ಆಶ್ರಮ ಶಾಲೆ ಕದ್ರಿ ಇಲ್ಲಿ ಜರುಗಿದ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಕಾರ್ಯಕ್ರಮ ಬುಧವಾರ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಬಸವರಾಜ ಮಾತನಾಡಿ, ಯಕ್ಷಗಾನವು ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷಾ, ಶುದ್ಧಿ, ಧೈರ್ಯ, ಶಿಸ್ತು, ವ್ಯಕ್ತಿತ್ವ ಬೆಳವಣಿಗೆಗೆ ಹಾಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಸಮಾಜದಲ್ಲಿ ಬೆಳೆಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್ ಅಡಿಗ, ಯಕ್ಷಗಾನ ಕಲಾವಿದರಾದ ದಿನಕರ ಎಸ್ ಪಚ್ಚನಾಡಿ, ಹಾಸ್ಟೆಲ್ ವಾರ್ಡನ್ ಸರಸ್ವತಿ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ ಸ್ವಾಗತಿಸಿದರು.