ಮಿಜಾರು, ಮೂಡುಬಿದಿರೆ: ಮಂಗಳೂರಿನ ಸಸಿಹಿತ್ಲುವಿನಲ್ಲಿ ಈಚೆಗೆ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಸ್ಪರ್ಧಿಸಿದ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. 

ಜನಪದ ನೃತ್ಯ (ಡೊಳ್ಳು- ಪ್ರಥಮ), ಜನಪದ ನೃತ್ಯ (ಏಕವ್ಯಕ್ತಿ) ಪ್ರಥಮ, ಕತೆ ಬರೆಯುವುದು- ಪ್ರಥಮ ಮತ್ತು ದ್ವಿತೀಯ, ಭಾಷಣ ಕಲೆ -ಪ್ರಥಮ, ಕವಿತೆ ಬರೆಯುವುದು -ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದಿದ್ದಾರೆ. 

ಪ್ರಥಮ ಬಹುಮಾನ ವಿಜೇತರು ರಾಜ್ಯಮಟ್ಟದ ಯುವಜನೋತ್ಸವಕ್ಕೆ ಆಯ್ಕೆಯಾಗಿದ್ದಾರೆ. 

ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ ಆಳ್ವ ಅಭಿನಂದಿಸಿದ್ದಾರೆ.