ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವಸತಿ ನಿಲಯದಲ್ಲಿ ನೇಣು ಹಾಕಿಕೊಂಡು ವೈದ್ಯಕೀಯ ವಿದ್ಯಾರ್ಥಿ 22ರ ಅಭಯ್ ರೆಡ್ಡಿ ತಾಕೊಲೆ ಮಾಡಿಕೊಂಡಿದ್ದಾರೆ. ಕಾಲೇಜಿನ ಪ್ರಾಂಶುಪಾಲರ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ.
ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಎರಡನೆಯ ವರುಷದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದ ಅಭಯ್ ರೆಡ್ಡಿ ಬೆಂಗಳೂರಿನ ಬೊಮ್ಮಸಂದ್ರದವರು. ಮೆಡಿಕಲ್ ಕೋರ್ಸ್ ಮಾಡಲು ಶಿವಮೊಗ್ಗದ ಕಾಲೇಜು ಸೇರಿ, ಹಾಸ್ಟೆಲ್‌ನಲ್ಲಿ ವಾಸವಿದ್ದರು.