ಮೂಡುಬಿದಿರೆ ತಾಲೂಕಿನ ಅಶ್ವತಪುರ ಗ್ರಾಮದ ಶ್ರೀ ವಾಣಿವಿಲಾಸ ವಿದ್ಯಾಸಂಸ್ಥೆಯಲ್ಲಿ ನವೆಂಬರ್ 20ರಂದು ವಿದ್ಯಾರ್ಥಿಗಳಿಗೆ ಗ್ರಾಮೀಣ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಬೆಂಗಳೂರು ಸೂರ್ಯ ಫೌಂಡೇಶನ್ ನ ಜಿಲ್ಲಾ ಸಂಯೋಜಕ, ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆಯವರು ಮಾಹಿತಿಯನ್ನು ನೀಡಿದರು. ಒಂದನೇ ತರಗತಿಯಿಂದ ಪಿಯುಸಿ ತನಕ ಗ್ರಾಮೀಣ ಪ್ರದೇಶದಲ್ಲಿಯೇ ಕಲಿಯುವುದರಿಂದ ಸರಕಾರ ನೀಡುತ್ತಿರುವ ಗ್ರಾಮೀಣ ಕೃಪಾಂಕ ಪಡೆಯಲು ಸಾಧ್ಯವಿದೆ ಎಂದು ಹಲವಾರು ಉದಾಹರಣೆಗಳ ಮೂಲಕ ತಿಳಿಸಿಕೊಟ್ಟರು.
ಈ ಸಂದರ್ಭದಲ್ಲಿ ಅಧ್ಯಾಪಕ ವರ್ಗ ಹಾಗೂ ವಿದ್ಯಾರ್ಥಿ ವೃಂದ ಹಾಜರಿದ್ದು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.