ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ರೋಟರಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ರೋಟರಿ ಪದವಿ ಪೂರ್ವ ಕಾಲೇಜು ತಂಡವನ್ನು 2-0 ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.  

ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ರೋಟರಿ ಪದವಿ ಪೂರ್ವ ಕಾಲೇಜಿನ ತಂಡವನ್ನು 2-1 ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.