ಮೂಡುಬಿದಿರೆ: ಬಲ್ಮಟದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ಪುರುಷರ  ತಂಡವು ಪ್ರಥಮ ಸ್ಥಾನವನ್ನು ಪಡೆದರೆ, ಮಹಿಳೆಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡರು.  

ಆ ಮೂಲಕ ಆಳ್ವಾಸ್ ಪದವಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಅಂತರ್ ವಿವಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.