ವರದಿ ರಾಯಿ ರಾಜಕುಮಾರ ಮೂಡುಬಿದಿರೆ 

ಮೂಡುಬಿದಿರೆ: ಸ್ಥಳೀಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಎನ್ ಐ ಎ ಎಸ್ ಸಂಯುಕ್ತ ಆಶ್ರಯದಲ್ಲಿ ಉಳ್ಳಾಲದ ಬಿಎಂ ಶಾಲೆಯಲ್ಲಿ ವಿಜ್ಞಾನ ಸಂಸ್ಥೆಯ ಅಧ್ಯಯನ ಹಾಗೂ ವಿದ್ಯಾರ್ಥಿಗಳನ್ನು ವಿಜ್ಞಾನಿಗಳನ್ನಾಗಿ ಮಾಡುವ ಯೋಜನೆ ನಡೆಯಿತು. 

ಮನುಷ್ಯನ ದುರಾಸೆಯಿಂದ ಕರಾವಳಿಯ ಹವಾಮಾನ ಬದಲಾವಣೆಗೊಂಡು ವೈಪರೀತ್ಯಕ್ಕೆ ಕಾರಣವಾಗಿದೆ ಎಂದು ಬೆಂಗಳೂರು ಭಾರತೀಯ ವಿಜ್ಞಾನ ರಾಷ್ಟ್ರೀಯ ಅಧ್ಯಯನ ಸಂಸ್ಥೆ ಇಸ್ರೋ ದ ಡಾ. ಪಿ ಜಿ ದಿವಾಕರ್ ಅಭಿಪ್ರಾಯ ಪಟ್ಟರು. ವಿದ್ಯಾರ್ಥಿಗಳು ವಿಜ್ಞಾನದ ಕಡೆಗೆ ಆಸಕ್ತಿಯನ್ನು ಹೆಚ್ಚಿಸಿಕೊಂಡು ಅನ್ವೇಷಣೆಯತ್ತ ದೃಷ್ಟಿ ಹರಿಸಬೇಕೆಂದು ಪ್ರಾಧ್ಯಾಪಕ ವಿವಿ ವಿನಯ್ ಕೇಳಿಕೊಂಡರು. ವಿದ್ಯಾರ್ಥಿಗಳು ವೈಜ್ಞಾನಿಕ ಹಾಗೂ ಕ್ರಿಯಾತ್ಮಕ ಮನೋಭಾವವನ್ನು ಬೆಳೆಸಿಕೊಂಡು ಹೆಚ್ಚು ಬೆಳೆಯಲು ಪ್ರಯತ್ನಿಸಬೇಕೆಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ, ವಿವೇಕ್ ಆಳ್ವ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 

ಉಳ್ಳಾಲ ಬಿ ಎಂ ಶಾಲೆಯ ಜಯವಂತಿ ಸೊಂಸ್, ಹೆರೋನ್ ಹಿಲ್ಡಾ ವೇದಿಕೆಯಲ್ಲಿದ್ದರು. ಡಾ. ವಿನಯ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.