ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದಿರೆ ಕೋ ಆಪರೇಟಿವ್ ಸರ್ವಿಸ್ ಸೊಸೈಟಿಯ ವಾರ್ಷಿಕ ಮಹಾಸಭೇಯು ಆಗಸ್ಟ್ ಮೂರರಂದು ಸ್ವರಾಜ್ಯ ಮೈದಾನದ ಸ್ಕೌಟ್ ಗೈಡ್ಸ್ ಕನ್ನಡ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಬಾಹುಬಲಿ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಘುವೀರ್ ಕಾಮತ್ ವಾರ್ಷಿಕ ವರದಿ ಮಂಡಿಸಿದರು. ಸಭೆಯಲ್ಲಿ ವಿಶೇಷ ಯೋಜನೆಗಳ ಮಂಡನೆ ಮಾಡಲಾಯಿತು.
ವೇದಿಕೆಯಲ್ಲಿ ಉಪಾಧ್ಯಕ್ಷ ಎಂ ಗಣೇಶ್ ನಾಯಕ್, ನಿರ್ದೇಶಕರುಗಳಾದ ಕೆ ಅಭಯ ಚಂದ್ರ ಜೈನ್, ಜಾರ್ಜ್ ಮೋನಿಸ್, ಮನೋಜ್ ಶೆಟ್ಟಿ, ಸಿ ಎಚ್ ಅಬ್ದುಲ್ ಗಫೂರ್, ಎಂ ಪಿ ಅಶೋಕ ಕಾಮತ್, ಜ್ಞಾನೇಶ್ವರ ಕಾಳಿಂಗ ಪೈ, ಜಯರಾಮ ಕೋಟ್ಯಾನ್, ಎಂ ಪದ್ಮನಾಭ, ಪ್ರೇಮ ಎಸ್ ಸಾಲಿಯಾನ್, ಅನಿತಾ ಪಿ ಶೆಟ್ಟಿ, ದಯಾನಂದ ನಾಯ್ಕ, ಹಾಗೂ ವಿಶೇಷ ಕಾರ್ಯನಿರ್ವಹಣಾ ಅಧಿಕಾರಿ ಎಂ ಚಂದ್ರಶೇಖರ್ ಉಪಸ್ಥಿತರಿದ್ದರು.