ವರದಿ ರಾಯಿ ರಾಜಕುಮಾರ ಮೂಡುಬಿದಿರೆ 

ಮೂಡುಬಿದಿರೆ:  ನೀಲಿಕೆರೆಯಲ್ಲಿ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಮಂಗಳೂರು ಎಂ ಆರ್ ಪಿ ಎಲ್ ಸಿ ಎಸ್ ಆರ್ ಅನುದಾನದ 35 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸವನ್ನು ನೆರವೇರಿಸಲಾಯಿತು. 

ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿ ಶಾಲೆಗೆ ಅಗತ್ಯ ಇರುವ ಸೌಕರ್ಯವನ್ನು ಒದಗಿಸುವಲ್ಲಿ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುತ್ತಿದೆ. ಶಾಲೆಯ ಮುಖ್ಯ ಶಿಕ್ಷಕಿ ಹಾಗೂ ಶಿಕ್ಷಕ ವರ್ಗದವರು ಉತ್ತಮವಾಗಿ ಕೆಲಸ ಮಾಡುತ್ತಿರುವುದರಿಂದಾಗಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿ ಶಾಲೆ ಮುನ್ನಡೆ ಕೇಳುವುದಕ್ಕೆ ಸಂತಸವನ್ನು ಸೂಚಿಸಿದರು. ಸ್ಥಳೀಯರು ಕೂಡ ತಮ್ಮ ಮಕ್ಕಳನ್ನು ಸೇರಿಸುವ ಮೂಲಕವಾಗಿ ಸರಕಾರದ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ನಾಗರಿಕದಲ್ಲಿ ವಿನಂತಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಗಳು, ಎಲ್ಲಾ ಶಿಕ್ಷಕ ವರ್ಗದವರು ಹಾಗೂ ಇತರ ಮುಂದಾಳುಗಳು ಹಾಜರಿದ್ದರು.