ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಬೆದ್ರ ದವರ ಕುಟುಂಬ ಸಮ್ಮಿಲನ ವಿಶೇಷ ಕಾರ್ಯಕ್ರಮದಲ್ಲಿ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ನಡೆಯುವ ಪಿಲಿ ನಲಿಕೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜುಲೈ 27ರಂದು ನಡೆಯಿತು.
ಮೂಡುಬಿದಿರೆ ರಿಂಗ್ ರೋಡ್ ನ ಪ್ರೀತಮ್ ಗಾರ್ಡನ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸುದರ್ಶನ್ ಎಂ, ಉದ್ಯಮಿ ಶ್ರೀಪತಿ ಭಟ್, ಪವರ್ ಫ್ರೆಂಡ್ಸ್ ಅಧ್ಯಕ್ಷ ವಿನಯ್ ಕುಮಾರ್ ಹಾಗೂ ಪದಾಧಿಕಾರಿಗಳು ಹಾಜರಿದ್ದು ಆಮಂತ್ರಣ ಪತ್ರಿಕೆ ಯನ್ನು ಬಿಡುಗಡೆ ಮಾಡಲಾಯಿತು.