ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದಿರೆ: ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಜನವರಿ 12 ರಂದು ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು ಬಿಡುಗಡೆ ಗೊಳಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಡಿಗಳ್ ಅನಂತ ಕೃಷ್ಣ ಭಟ್, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯ ಚಂದ್ರ ಜೈನ್, ಅನುವಂಶಿಕ ಆಡಳಿತ ಮೊಕ್ತೇಸರ ಕುಲದೀಪ್ ಎಂ, ಉದ್ಯಮಿ ಶ್ರೀಪತಿ ಭಟ್, ವಿದ್ಯಾ ರಮೇಶ್ ಭಟ್ ಹಾಗೂ ಇತರರು ಹಾಜರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಧನಂಜಯ ಕುಂಬ್ಳೆ ನೆರವೇರಿಸಿದರು.