ವರದಿ ರಾಯಿ ರಾಜಕುಮಾರ
ಮೂಡುಬಿದಿರೆ: ಸಾವಿರ ಕಂಬದ ಬಸದಿ ಆವರಣದಲ್ಲಿ ನ. 2 ರಂದು ಸಂಜೆ 5.30 ರಿಂದ ಯಕ್ಷಗಾನ ಅರ್ಥಧಾರಿ ಎಂ. ಶ್ರೀಧರ ಪಾಂಡಿ ಸಾಣೂರು ಅವರ 14ನೇ ವರ್ಷದ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಮೂಡುಬಿದಿರೆ ಜೈನ ಮಠದ ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾರ್ಯಕ್ರಮದ ಸಂಯೋಜಕ ಮಹಾವೀರ ಪಾಂಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶ್ರೀಧರ ಪಾಂಡಿಯವರ ಸಂಸ್ಕರಣೆ ಮತ್ತು ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಭಾಗವತ ಕಣಿಯೂರು ಸೂರ್ಯನಾರಾಯಣ ಭಟ್ ಅವರಿಗೆ ನೀಡಿ ಗೌರವಿಸಲಾಗುವುದು ಎಂದರು.
ಬಸದಿಗಳ ಮೊಕ್ತೇಸರ ಪಟ್ಣಶೆಟ್ಟಿ ಸುಧೇಶ್ ಕುಮಾರ್, ಶ್ರೀಕಾಂತ್ ಪಾಂಡಿ, ಸಂಜಯಂತ್ ಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.