ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ದಕ್ಷಿಣ ಕನ್ನಡ ಜಿಲ್ಲೆಯ ಚೇಳ್ಯಾರು ಹಿರಿಯ ಪ್ರಾಥಮಿಕ ಶಾಲೆಗೆ ಎಂ.ಆರ್.ಪಿ.ಎಲ್. ನವರ ಸಿ.ಎಸ್ಸಾರ್. ನ 30 ಲಕ್ಷ ಅನುದಾನದಲ್ಲಿ ಎರಡು ನೂತನ ಕೊಠಡಿ ನಿರ್ಮಾಣ ಮಾಡಲಾಯಿತು. ಜುಲೈ 9 ರಂದು ಶಾಸಕ ಉಮಾನಾಥ ಕೋಟ್ಯಾನ್ ಅವರು ನೂತನ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿ ವಿವಿಧ ಸಂಸ್ಥೆಗಳು ಶಾಲೆ, ಕಾಲೇಜಿನ ಅಭಿವೃದ್ಧಿ ಮಾಡುತ್ತಿರುವುದು ಬಹಳ ಮೆಚ್ಚುಗೆಯ ಕೆಲಸ. ಅದಕ್ಕಾಗಿ ಎಂ.ಆರ್.ಪಿ.ಎಲ್. ಸಂಸ್ಥೆಯನ್ನು ಅಭಿನಂದಿಸಿದರು.
ತರುವಾಯ ಸರಕಾರಿ ಪದವಿ ಪೂರ್ವ ಕಾಲೇಜಿನ ಈ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನೆ ದೀಪ ಬೆಳಗಿ ನೆರವೇರಿಸಿದರು. ವಿದ್ಯಾರ್ಥಿಗಳಿಗೆ ಉತ್ತಮ, ಶಿಸ್ತಿನ ಕಾರ್ಯಕ್ಕೆ ಪ್ರಮಾಣ ವಚನ ಬೋಧಿಸಲಾಯಿತು. ಶಾಲೆಯ ಎಲ್ಲ ಶಿಕ್ಷಕರೂ, ವಿದ್ಯಾರ್ಥಿಗಳೂ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.